Select Location
All Locations
State
Region
City / District
ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

ಬೆಂಗಳೂರಿಗರೇ ಗಮನಿಸಿ: ಸಿಎಂ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು

ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಕರ್ನಾಟಕದ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆ ಸುಗಮ ಸಂಚಾರದ ದೃಷ್ಟಿಯಿಂದ ಕೆಲ ರಸ್ತೆಗಳ ಸಂಚಾರವನ್ನು ಬದಲಾವಣೆ ಮಾಡಿ ಬೆಂಗಳೂರು ನಗರ ಟ್ರಾಫಿಕ್​​ ಪೊಲೀಸರು ಆದೇಶ ಹೊರಡಿಸಿದ್ದಾರೆ. ಯಾವೆಲ್ಲ ಮಾರ್ಗಗಗಳಲ್ಲಿ ಸಂಚಾರ ನಿಷೇಧ? ಬದಲಿ ಮಾರ್ಗಗಳು ಯಾವವು? ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ.ಶಿವಕುಮಾರ್ (DK Shivakumar)​​ ನಾಳೆ (ಜೂನ್​​ 03) ಲೋಕಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶ ಹಾಗೂ ರಾಜ್ಯದ ಅತಿಗಣ್ಯವ್ಯಕ್ತಿಗಳು ಹಾಗೂ ಗಣ್ಯವ್ಯಕ್ತಿಗಳು ಭಾಗವಹಿಸಲಿದ್ದಾರೆ. ಲೋಕಭವನದಲ್ಲಿ ಪ್ರಮಾಣ ವಚನ ಕಾರ್ಯಕ್ರಮ ಹಾಗೂ ರೇಸ್‌ಕೋರ್ಸ್ ರಸ್ತೆಯ ಸಾರ್ವಜನಿಕ ಕಾರ್ಯಕ್ರಮದ ನಿಮಿತ್ತ ಹೆಚ್ಚಿನ ಸಂಚಾರ ದಟ್ಟಣೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರ ಸುಗಮ ಸಂಚಾರದ ಹಿತದೃಷ್ಟಿಯಿಂದ ಜೂನ್​​ 3ರ ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 8ರ ವರೆಗೆ ಕೆಲ ರಸ್ತೆಗಳಲ್ಲಿ ಸಂಚಾರ ಮಾರ್ಪಾಡುಗಳನ್ನು ಮಾಡಲಾಗಿದೆ ಎಂದು ಬೆಂಗಳೂರಿನ ಚಂಚಾರ ಪೊಲೀಸರು ತಿಳಿಸಿದ್ದಾರೆ.

Source : TV9 Kannada

1 hour ago

Home Flash News