Supreme Court; ಕರ್ನಾಟಕ ಹೈಕೋರ್ಟ್‌ಗೆ 6 ಹೊಸ ನ್ಯಾಯಮೂರ್ತಿಗಳ ನೇಮಕಕ್ಕೆ ಅಸ್ತು!
ನವದೆಹಲಿ: ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳ ಹೈಕೋರ್ಟ್‌ಗಳಿಗೆ ನೂತನ ನ್ಯಾಯಮೂರ್ತಿಗಳ ನೇಮಕಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಕೊಲಿಜಿಯಂ ಮಹತ್ವದ ಅನುಮೋದನೆ ನೀಡಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದಲ್ಲಿ ಜೂನ್ 2ರಂದು ನಡೆದ ಕೊಲಿಜಿಯಂ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಕರ್ನಾಟಕ ಹೈಕೋರ್ಟ್‌ಗೆ ಆರು ಮಂದಿ ವಕೀಲರನ್ನು ನ್ಯಾಯಮೂರ್ತಿಗಳನ್ನಾಗಿ ನೇಮಿಸಲು ಶಿಫಾರಸು ಮಾಡಲಾಗಿದೆ. ಕರ್ನಾಟಕ ಹೈಕೋರ್ಟ್‌ಗೆ ನೇಮಕಗೊಂಡವರು ಹೈಕೋರ್ಟ್ ವಕೀಲರಾಗಿ ಸೇವೆ ಸಲ್ಲಿಸುತ್ತಿರುವ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್ ಮತ್ತು ಹೊಂಬೇಗೌಡ ಶಾಂತಿ ಭೂಷಣ್ ಅವರನ್ನು ಕರ್ನಾಟಕ ಹೈಕೋರ್ಟ್‌ನ ನೂತನ ನ್ಯಾಯಮೂರ್ತಿಗಳನ್ನಾಗಿ ನೇಮಿಸುವ ಪ್ರಸ್ತಾವನೆಗೆ ಕೊಲಿಜಿಯಂ ಹಸಿರು ನಿಶಾನೆ ತೋರಿದೆ. ಕರ್ನಾಟಕದ ಜೊತೆಗೆ ಇತರ ಮೂರು ರಾಜ್ಯಗಳ ಹೈಕೋರ್ಟ್‌ಗಳಿಗೂ ನ್ಯಾಯಮೂರ್ತಿಗಳ ನೇಮಕಾತಿ ಹಾಗೂ ಬಡ್ತಿ ಪ್ರಸ್ತಾವನೆಗಳಿಗೆ ಕೊಲಿಜಿಯಂ ಒಪ್ಪಿಗೆ ಸೂಚಿಸಿದೆ.