DK Shivakumar Oath: ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆಶಿ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ
ಬೆಂಗಳೂರು: ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಬುಧವಾರ (ಜೂನ್ 03) ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಡಿಕೆ ಶಿವಕುಮಾರ್ ಅವರು ನೋಣವಿನ ಕೆರೆ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ಸಂದರ್ಭದಲ್ಲಿ ನೆರೆದಿದ್ದ ಯುವ ಸಮೂಹ ಡಿಕೆ, ಡಿಕೆ ಎಂದು ಘೋಷಣೆ ಕೂಗಿದ್ದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಕೆಸಿ ವೇಣುಗೋಪಾಲ್, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳ ಮುಖ್ಯಮಂತ್ರಿ ಸತೀಶನ್, ಹೈಕೋರ್ಟ್ ಚೀಫ್ ಜಸ್ಟೀಸ್ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.