Select Location
All Locations
State
Region
City / District
Indian Cricket: ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯಗೆ ಬೆಂಗಳೂರಿಗೆ ಬರಲು ಬಿಸಿಸಿಐ ಸೂಚನೆ

Indian Cricket: ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯಗೆ ಬೆಂಗಳೂರಿಗೆ ಬರಲು ಬಿಸಿಸಿಐ ಸೂಚನೆ

ಬೆಂಗಳೂರು: ಭಾರತ ತಂಡವು ಅಫ್ಘಾನಿಸ್ತಾನ ವಿರುದ್ಧ ಏಕೈಕ ಟೆಸ್ಟ್ ಮತ್ತು ಮೂರು ಏಕದಿನ ಪಂದ್ಯಗಳ ಸರಣಿ ಆಡಲಿದೆ. ಜೂನ್ 6 ರಂದು ಟೆಸ್ಟ್‌ ಪಂದ್ಯ ಆರಂಭವಾಗಲಿದ್ದು, ಜೂನ್ 13 ರಂದು ಏಕದಿನ ಪಂದ್ಯಗಳು ಆರಂಭವಾಗಲಿವೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಈಗಾಗಲೇ ಎರಡೂ ಸ್ವರೂಪಗಳಿಗೆ ತಂಡಗಳನ್ನು ಪ್ರಕಟಿಸಿದೆ. ಏಕದಿನ ಪಂದ್ಯಗಳಲ್ಲಿ, ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಎಂಬ ಇಬ್ಬರು ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳಲಾಗಿದೆ, ಆದರೆ ಪಂದ್ಯಗಳಲ್ಲಿ ಅವರ ಭಾಗವಹಿಸುವಿಕೆಯು ಫಿಟ್‌ನೆಸ್ ಕ್ಲಿಯರೆನ್ಸ್‌ಗೆ ಒಳಪಟ್ಟಿರುತ್ತದೆ ಎಂದು ಮಂಡಳಿ ತಿಳಿಸಲಾಗಿದೆ.

ಹಾರ್ದಿಕ್ ಬೆಂಗಳೂರಿನಲ್ಲಿರುವ ಬಿಸಿಸಿಐ ಸೆಂಟರ್ ಆಫ್ ಎಕ್ಸಲೆನ್ಸ್ (ಸಿಒಇ) ತಲುಪಲಿದ್ದಾರೆ. ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗಾಗಿ ಭಾರತದ ತಂಡದ ಆಟಗಾರರೊಂದಿಗೆ ಸೇರುವ ಮೊದಲು ಒಂದು ವಾರ ಅಲ್ಲಿಯೇ ಕಳೆಯುವ ನಿರೀಕ್ಷೆಯಿದೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಹಾರ್ದಿಕ್ ಮತ್ತು ರೋಹಿತ್ ಇಬ್ಬರಿಗೂ ಸಿಒಇಗೆ ವರದಿ ಮಾಡಲು ಬಿಸಿಸಿಐ ಸೂಚಿಸಿದೆ. ಆದರೆ ರೋಹಿತ್ ಬಗ್ಗೆ ಯಾವುದೇ ಮಾಹಿತಿ ಇಲ್ಲ.‌ ಸತತ ಎರಡನೇ ಬಾರಿ ಐಪಿಎಲ್‌ ಗೆದ್ದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪ್ರಮುಖ ಆಟಗಾರ ವಿರಾಟ್‌ ಕೊಹ್ಲಿ ಅವರು ಅಫ್ಘಾನಿಸ್ತಾನ ವಿರುದ್ದದ ಏಕದಿನ ಸರಣಿ ತಪ್ಪಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮಂಡಿರಜ್ಜು ಗಾಯದಿಂದ ಬಳಲುತ್ತಿರುವ ವಿರಾಟ್‌ ಅವರಿಗೆ ಎರಡು ವಾರಗಳ ವಿಶ್ರಾಂತಿಗೆ ಸೂಚಿಸಿದ್ದಾರೆ ಎನ್ನಲಾಗಿದೆ. ಆದರೆ ಬಿಸಿಸಿಐ ಈ ಬಗ್ಗೆ ಇದುವರೆಗೆ ಅಧಿಕೃತವಾಗಿ ಪ್ರಕಟಿಸಿಲ್ಲ.

Source : Udayavani

1 hour ago

Home Flash News